ಶ್ರೀನಗರ: ಭಾರತದ ವಾಯುಸೇನೆಯ ಸರ್ಜಿಕಲ್ ಸ್ಟ್ರೈಕ್ ಬಳಿಕ ಪ್ರತಿದಾಳಿ ನಡೆಸಲು ನುಗ್ಗಿದ್ದ ಪಾಕಿಸ್ತಾನದ ವಿಮಾನವನ್ನು ಭಾರತ ಹೊಡೆದುರುಳಿಸಿದೆ.
ಇಂದು ಬೆಳಗ್ಗೆ ಗಡಿ ನಿಯಂತ್ರಣ ರೇಖೆಯನ್ನು ದಾಟಿ ಎಫ್ -16 ವಿಮಾನ ಭಾರತವನ್ನು ಪ್ರವೇಶಿಸಿತ್ತು. ಗಡಿಯನ್ನು ದಾಟಿ 3 ಕಿ.ಮೀ ಪ್ರವೇಶಿಸಿದ ವಿಮಾನವನ್ನು ಭಾರತ ಹೊಡೆದು ಉರುಳಿಸಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಭಾರತದ ಗಡಿಯಲ್ಲಿ ಹೈ ಅಲರ್ಟ್ ಘೋಷಣೆಯಾಗಿದ್ದು ಶ್ರೀನಗರ ಮತ್ತು ಅಮೃತಸರ ವಿಮಾನ ನಿಲ್ದಾಣಗಳನ್ನು ಬಂದ್ ಮಾಡಲಾಗಿದೆ. ವಿಮಾನಗಳ ಹಾರಾಟವನ್ನು ಸಂಪೂರ್ಣ ಬಂದ್ ಮಾಡಲಾಗಿದೆ. ಪಾಕಿಸ್ತಾನದ ಗಡಿಗೆ ಹತ್ತಿರದಲ್ಲಿರುವ ಧರ್ಮಶಾಲಾ, ಡೆಹ್ರಡೂನ್‍ನಲ್ಲಿ ವಿಮಾನ ಹಾರಾಟವನ್ನು ಬಂದ್ ಮಾಡಲಾಗಿದೆ.
No comments:
Post a Comment